May 10, 2026
Sunday, May 10, 2026
spot_img

Healthy Food | ದಿನನಿತ್ಯದ ಆಹಾರದಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಬಳಸಿ ನುಗ್ಗೆ ಸೊಪ್ಪಿನ ಚಟ್ನಿ ಪುಡಿ

ನುಗ್ಗೆ ಸೊಪ್ಪನ್ನು ಪ್ರಕೃತಿಯ ಅತ್ಯಂತ ಶಕ್ತಿಶಾಲಿ ಸೂಪರ್‌ಫುಡ್‌ಗಳಲ್ಲಿ ಒಂದು ಎಂದು ಹೇಳಬಹುದು. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣಾಂಶ, ಪ್ರೋಟೀನ್ ಮತ್ತು ವಿಟಮಿನ್‌ಗಳು ಹೇರಳವಾಗಿವೆ. ದಿನನಿತ್ಯದ ಆಹಾರದಲ್ಲಿ ನುಗ್ಗೆ ಸೊಪ್ಪನ್ನು ಬಳಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಆದರೆ ಪ್ರತಿದಿನ ಹಸಿ ಸೊಪ್ಪನ್ನು ಬಳಸುವುದು ಎಲ್ಲರಿಗೂ ಸಾಧ್ಯವಾಗದಿರಬಹುದು. ಅಂತಹ ಸಂದರ್ಭಗಳಲ್ಲಿ ನುಗ್ಗೆ ಸೊಪ್ಪಿನ ಚಟ್ನಿ ಪುಡಿ ಸುಲಭವಾದ ಮಾರ್ಗವಾಗಿದೆ.

ಬೇಕಾಗುವ ಸಾಮಾಗ್ರಿಗಳು:

ನುಗ್ಗೆ ಸೊಪ್ಪು
ಉದ್ದಿನ ಬೇಳೆ
ಕಡಲೆ ಬೇಳೆ
ಒಣ ಮೆಣಸಿನಕಾಯಿ
ಬಿಳಿ ಎಳ್ಳು
ಜೀರಿಗೆ
ಇಂಗು
ಹುಣಸೆಹಣ್ಣು
ಬೆಲ್ಲ
ಉಪ್ಪು
ಎಣ್ಣೆ

ತಯಾರಿಸುವ ವಿಧಾನ:
ಮೊದಲು ಒಂದು ಬಾಣಲೆಗೆ ಒಂದು ಚಮಚ ಎಣ್ಣೆ ಹಾಕಿ, ನಂತರ ಒಣಗಿದ ನುಗ್ಗೆ ಸೊಪ್ಪನ್ನು ಹಾಕಿ ಅದು ಗರಿಗರಿಯಾಗುವವರೆಗೆ ಸಣ್ಣ ಉರಿಯಲ್ಲಿ ಚೆನ್ನಾಗಿ ಹುರಿದು ಪ್ರತ್ಯೇಕವಾಗಿ ಎತ್ತಿಟ್ಟುಕೊಳ್ಳಬೇಕು. ಬಳಿಕ ಅದೇ ಬಾಣಲೆಗೆ ಮತ್ತೊಂದು ಚಮಚ ಎಣ್ಣೆ ಹಾಕಿ ಕಡಲೆ ಬೇಳೆ ಮತ್ತು ಉದ್ದಿನ ಬೇಳೆಯನ್ನು ಹೊಂಬಣ್ಣ ಬರುವವರೆಗೆ ಹುರಿದುಕೊಂಡು, ನಂತರ ಒಣ ಮೆಣಸಿನಕಾಯಿ, ಜೀರಿಗೆ, ಎಳ್ಳು ಮತ್ತು ಇಂಗು ಹಾಕಿ ಸುವಾಸನೆ ಬರುವವರೆಗೆ ಹುರಿದುಕೊಳ್ಳಬೇಕು. ಹುರಿದ ಎಲ್ಲಾ ಸಾಮಗ್ರಿಗಳನ್ನು ಸಂಪೂರ್ಣವಾಗಿ ತಣ್ಣಗಾಗಲು ಬಿಡಬೇಕು. ಬಳಿಕ ಮಿಕ್ಸಿ ಜಾರ್‌ಗೆ ಹುರಿದ ಬೇಳೆಗಳು, ಮೆಣಸಿನಕಾಯಿ, ಹುಣಸೆಹಣ್ಣು, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬೆಲ್ಲ ಹಾಕಿ ಮೊದಲು ತರಿತರಿಯಾಗಿ ರುಬ್ಬಿಕೊಳ್ಳಬೇಕು. ಕೊನೆಯದಾಗಿ ಹುರಿದ ನುಗ್ಗೆ ಸೊಪ್ಪನ್ನು ಸೇರಿಸಿ ಮತ್ತೊಮ್ಮೆ ಪುಡಿ ಮಾಡಿದರೆ ರುಚಿಯಾದ ಮತ್ತು ಆರೋಗ್ಯವಾದ ನುಗ್ಗೆ ಸೊಪ್ಪಿನ ಚಟ್ನಿ ಪುಡಿ ಸಿದ್ಧವಾಗುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !