May 10, 2026
Sunday, May 10, 2026
spot_img

ತಮಿಳುನಾಡಿನಲ್ಲಿ ಹೊಸ ಯುಗ ಆರಂಭ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಜೋಸೆಫ್ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ರಾಜಕಾರಣದಲ್ಲಿ ದಶಕಗಳ ಕಾಲ ನಡೆದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಮುಖ ಆಡಳಿತಕ್ಕೆ ಇಂದು ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ಜನಪ್ರಿಯ ನಟ ಸಿ. ಜೋಸೆಫ್ ವಿಜಯ್ ಅವರು ಇಂದು ಬೆಳಿಗ್ಗೆ ಚೆನ್ನೈನ ಜವಾಹರಲಾಲ್ ನೆಹರು ಒಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಸಮಾರಂಭಕ್ಕೆ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಸಾಕ್ಷಿಯಾದರು. 1967ರ ನಂತರ ತಮಿಳುನಾಡಿನಲ್ಲಿ ಪ್ರಾದೇಶಿಕ ದ್ರಾವಿಡ ಪಕ್ಷಗಳ ಅಧಿಪತ್ಯವನ್ನು ಮೀರಿ ಮೂರನೇ ಶಕ್ತಿಯಾಗಿ ಉದಯಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ TVK ಏಕಾಂಗಿಯಾಗಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಬೇಕಾದ 118ರ ಗಡಿಯನ್ನು ದಾಟಲು ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳು ಬೆಂಬಲ ಸೂಚಿಸಿದ್ದು, ವಿಜಯ್ ಈಗ ಒಟ್ಟು 120 ಶಾಸಕರ ಬಲ ಹೊಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !