ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ತಮಿಳುನಾಡಿನ ಅಧಿಕಾರದ ಗದ್ದುಗೆಗೆ ಏರಿದ ವಿಜಯ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.
ಈ ಹಿನ್ನೆಲೆ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿ ಉತ್ತಮವಾಗಿರಲಿ. ನಾಡಿನ ಜನರ ಜೀವನ ಅಭಿವೃದ್ಧಿಗೆ ತಮಿಳುನಾಡು ಸರ್ಕಾರದೊಂದಿಗೆ ಸದಾ ಕೇಂದ್ರ ಸರಕಾರ ಜೊತೆ ನೀಡಲಿದ್ದು, ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ವಿಜಯ್, ಈ ಹಿಂದಿನ ಡಿಎಂಕೆ ಸರ್ಕಾರ ಮಾಡಿದ ಸಾಲಗಳ ಕುರಿತು ಶ್ವೇತಪತ್ರ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದರು.



