May 10, 2026
Sunday, May 10, 2026
spot_img

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿ ಜೋಸೆಫ್ ವಿಜಯ್ ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ರಾಜಕೀಯ ನಿರ್ಧಾರ ಕೈಗೊಂಡಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಆಯ್ಕೆಯಾಗಿದ್ದ ಅವರು, ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಪೆರಂಬೂರು ಕ್ಷೇತ್ರವನ್ನು ಪ್ರತಿನಿಧಿಸಲು ತೀರ್ಮಾನಿಸಿರುವುದಾಗಿ ವಿಧಾನಸಭಾ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ರಾಜೀನಾಮೆ ಪತ್ರವನ್ನು ವಿಧಾನಸಭೆಯ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಸಚಿವರಾದ ಕೆ ಎ ಸೆಂಗೋಟ್ಟೈಯನ್ ಹಾಗೂ ಪಿ ವೆಂಕಟರಮಣನ್ ಮೂಲಕ ಈ ಪತ್ರವನ್ನು ಸಲ್ಲಿಸಲಾಗಿದೆ ಎಂದು ಅಧಿಕೃತ ವಲಯದಲ್ಲಿ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ:

ಚೆನ್ನೈಯ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಹಲವು ಸಚಿವರು ಕೂಡ ಹೊಸ ಸಂಪುಟದ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು.

234 ಸದಸ್ಯ ಬಲದ ಸದನದಲ್ಲಿ 120 ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ವಿಜಯ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಮೈತ್ರಿಕೂಟದ ಹಲವು ನಾಯಕರು ಉಪಸ್ಥಿತರಿದ್ದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !