ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ಆಡಳಿತದ ಚುಕ್ಕಾಣಿ ಹಿಡಿದಿದ್ದು, ಇಂದು ಮುಂದಿನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಿತು.
ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವ ಶರ್ಮಾ ಅವರನ್ನು ಮತ್ತೆ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಸತತ ಎರಡನೇ ಬಾರಿಗೆ ಅಸ್ಸಾಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿಯ ಕೇಂದ್ರ ವೀಕ್ಷಕ ಜೆ.ಪಿ. ನಡ್ಡಾ ಹಾಗೂ ಸಹ ವೀಕ್ಷಕ ನಯಾಬ್ ಸಿಂಗ್ ಸೈನಿ ಅವರು ಹಿಮಂತ ಬಿಸ್ವಾ ಶರ್ಮಾ ಅವರ ಆಯ್ಕೆಯನ್ನು ಘೋಷಿಸಿದರು.
ಮೇ 12ರಂದು ಅದ್ಧೂರಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜೊತೆಗೆ ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಭಾಗವಹಿಸಲಿದ್ದಾರೆ.



