June 25, 2026
Thursday, June 25, 2026
spot_img

ತಾಯಿಗಿಂತ ಆಸ್ತಿಯೇ ಹೆಚ್ಚಾಯ್ತು: ಮದರ್ಸ್ ಡೇ ದಿನವೇ ತಾಯಿಯನ್ನು ಗುಂಡಿಟ್ಟು ಕೊಂ*ದ ಮಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಟುಂಬದೊಳಗಿನ ಆಸ್ತಿ ವಿವಾದ ಕೆಲವೊಮ್ಮೆ ಎಷ್ಟು ಭೀಕರ ತಿರುವು ಪಡೆಯಬಹುದು ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಕುಟುಂಬದ ಆಸ್ತಿ ವಿಚಾರವಾಗಿ ಉಂಟಾದ ತೀವ್ರ ವಾಗ್ವಾದ ಕೊನೆಗೆ ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ತಾಯಿ ಮತ್ತು ತಮ್ಮನ ಮೇಲೆ ಮಗನೇ ಗುಂಡಿನ ದಾಳಿ ನಡೆಸಿದ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದ ಈ ಘಟನೆಯಲ್ಲಿ ರಾಜ್‌ಕಿಶೋರ್ ಗುಪ್ತಾ ಎಂಬಾತನ ಮೇಲೆ ಆರೋಪ ಕೇಳಿಬಂದಿದೆ.

ಪಿತ್ರಾರ್ಜಿತ ಆಸ್ತಿ ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯೊಳಗೆ ಬಹುಕಾಲದಿಂದ ಭಿನ್ನಾಭಿಪ್ರಾಯ ಇತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಕುಟುಂಬ ಸದಸ್ಯರ ನಡುವೆ ತೀವ್ರ ಜಗಳ ಉಂಟಾಗಿದೆ.

ಇದನ್ನೂ ಓದಿ:

ಮಾತಿನ ಚಕಮಕಿ ತಾರಕಕ್ಕೇರಿದ ವೇಳೆ ಆರೋಪಿ ಕೋಪೋದ್ರಿಕ್ತನಾಗಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ತಮ್ಮನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !