ಹೊಸ ದಿಗಂತ ಡಿಜಿಟಲ್ ಡೆಸ್ಕ್
ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಲಖನೌ ನೀಡಿದ 204 ರನ್ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ ಉತ್ತಮ ಆರಂಭ ಸಿಕ್ಕಿತು. ಸಂಜು ಸ್ಯಾಮ್ಸನ್ 28 ರನ್ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು. ಬಳಿಕ ಬಂದ ಉರ್ವಿಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದರು. ಉರ್ವಿಲ್ 23 ಎಸೆತಗಳಲ್ಲಿ 2 ಬೌಂಡರಿ, 8 ಸಿಕ್ಸರ್ಗಳ ಸಹಿತ 65 ರನ್ಗಳಿಸಿದರು.
ನಾಯಕ ಗಾಯಕ್ವಾಡ್ 42 ರನ್ಗಳಿಸಿ ತಂಡವನ್ನು ಗೆಲುವಿನ ದಡದತ್ತ ಕೊಂಡೊಯ್ಯಿದರು. ಗಾಯಕ್ವಾಡ್ ವಿಕೆಟ್ ನಂತರ ಕಾರ್ತಿಕ್ ಶರ್ಮಾ 20 ರನ್, ಡೆವಾಲ್ಡ್ ಬ್ರೆವಿಸ್ 10 ರನ್ಗಳಿಸಿದರು. ಆದರೆ ಅಂತಿಮವಾಗಿ ಶಿವಂ ದುಬೆ 7 ಎಸೆತಗಳಲ್ಲಿ 15, ಪ್ರಶಾಂತ್ ವೀರ್ 12 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇತ್ತ ಲಕ್ನೋ ತಂಡದ ಪ್ಲೇ ಆಫ್ ರೇಸ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.



