ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯ ಅನಿಶ್ಚಿತತೆ ಹೆಚ್ಚುತ್ತಿರುವ ಹೊತ್ತಿನಲ್ಲಿ ನರೇಂದ್ರ ಮೋದಿ ದೇಶದ ಜನತೆಗೆ ಇಂಧನ ಉಳಿತಾಯದ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ, ಪರ್ಯಾಯ ಮಾರ್ಗಗಳತ್ತ ಮುಖ ಮಾಡುವಂತೆ ಅವರು ಕರೆ ನೀಡಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಮೆಟ್ರೋ, ಬಸ್ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಹೆಚ್ಚು ಬಳಸುವಂತೆ ಸಲಹೆ ನೀಡಿದರು. ಜೊತೆಗೆ ಪರಿಸರ ಸ್ನೇಹಿ ವಿದ್ಯುತ್ ವಾಹನಗಳ ಬಳಕೆ ಹೆಚ್ಚಿದರೆ ಇಂಧನ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಗತ್ಯವಿರುವ ಕ್ಷೇತ್ರಗಳಲ್ಲಿ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಗೂ ಒತ್ತು ನೀಡಿದರು.
ಇದನ್ನೂ ಓದಿ:
ದೇಶದ ಆರ್ಥಿಕ ಸ್ಥಿರತೆ ಕಾಪಾಡಲು ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಮುಖ್ಯ ಎಂದು ಪ್ರಧಾನಿ ಹೇಳಿದರು. ಸಂಪನ್ಮೂಲಗಳನ್ನು ಮಿತವಾಗಿ ಬಳಸುವುದು, ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡುವುದು ಮತ್ತು ಉಳಿತಾಯದ ಮನೋಭಾವ ಬೆಳೆಸಿಕೊಳ್ಳುವುದು ಕಾಲದ ಅಗತ್ಯ ಎಂದು ಅವರು ತಿಳಿಸಿದರು.
ಇದೇ ವೇಳೆ ರಾಜಕೀಯ ವಿಷಯಗಳ ಮೇಲೂ ಪ್ರತಿಕ್ರಿಯಿಸಿದ ನರೇಂದ್ರ ಮೋದಿ, ಜನರ ವಿಶ್ವಾಸ ಅಭಿವೃದ್ಧಿ ಆಧಾರಿತ ರಾಜಕಾರಣದ ಕಡೆಗೆ ಹೆಚ್ಚುತ್ತಿದೆ ಎಂದು ಹೇಳಿ, ದೇಶದ ಭವಿಷ್ಯಕ್ಕಾಗಿ ಜವಾಬ್ದಾರಿಯುತ ಬಳಕೆ ಅನಿವಾರ್ಯ ಎಂದು ಒತ್ತಿ ಹೇಳಿದರು.



