July 6, 2026
Monday, July 6, 2026
spot_img

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಹೈದರಾಬಾದ್‌ ನಲ್ಲಿ ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಅವರು ದಿಢೀರ್ ಎಂಬಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಮನೆಗೆ ಭೇಟಿ ನೀಡಿದ್ದಾರೆ.

ಸಿಎಂ ಚಂದ್ರಬಾಬು ನಾಯ್ದ ಮನೆಗೆ ಭೇಟಿ ನೀಡಿದ ಮೋದಿ ಅವರಿಗೆ ಕುಟುಂಬಸ್ಥರಿಂದ ಆತ್ಮೀಯವಾದ ಸ್ವಾಗತ ಸಿಕ್ಕಿತು. ಬಳಿಕ ಎಲ್ಲರ ಜೊತೆ ಕುಳಿತು ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಸಚಿವ ನಾರಾ ಲೋಕೇಶ್ ಕುಟುಂಬ ಜೊತೆಗಿದ್ದರು.

ಬಳಿಕ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮನೆಗೂ ಭೇಟಿ ನೀಡಿದ ಮೋದಿ, ಪವನ್ ಕಲ್ಯಾಣ್ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಪವನ್ ಕುಟುಂಬಸ್ಥರೊಂದಿಗೆ ಸಮಯ ಕಳೆದಿದ್ದಾರೆ.

ಪವನ್ ಕಲ್ಯಾಣ್ ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಸರ್ಜರಿಗೆ ಒಳಗಾಗಿದ್ದರು. ಹೀಗಾಗಿ ಮೋದಿ ಮನೆಗೆ ಭೇಟಿ ನೀಡಿದ ಅವರು ಆರೋಗ್ಯದ ಕುರಿತು ವಿಚಾರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !