September 29, 2026
Tuesday, September 29, 2026
spot_img

ಅಮೆರಿಕ-ಇರಾನ್ ಉದ್ವಿಗ್ನತೆ ತೀವ್ರ: ‘ಸರ್ಪ್ರೈಸ್ ದಾಳಿ’ ಎಚ್ಚರಿಕೆ ನೀಡಿದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ಗಂಭೀರ ಹಂತ ತಲುಪಿದ್ದು, ಪಶ್ಚಿಮ ಏಷ್ಯಾದ ಪರಿಸ್ಥಿತಿ ಕಗ್ಗಂಟಾಗಿದೆ.

ಸಮುದ್ರ ಮಾರ್ಗದ ನಿಯಂತ್ರಣ ವಿಚಾರವಾಗಿ ಹೆಚ್ಚುತ್ತಿರುವ ಭಿನ್ನಾಭಿಪ್ರಾಯದ ನಡುವೆ, ಇರಾನ್ ಕಠಿಣ ಎಚ್ಚರಿಕೆ ನೀಡಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ‘ಅಮೆರಿಕ ಯಾವುದೇ ರೀತಿಯ ಆಕ್ರಮಣಕಾರಿ ಹೆಜ್ಜೆ ಇಟ್ಟರೆ ಅನಿರೀಕ್ಷಿತ ಪ್ರತಿದಾಳಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದೆ. ಹೊಸ ತಂತ್ರಜ್ಞಾನ ಆಧಾರಿತ ಶಸ್ತ್ರಾಸ್ತ್ರಗಳು ಮತ್ತು ವಿಭಿನ್ನ ಯುದ್ಧತಂತ್ರಗಳನ್ನು ಬಳಸಲು ತಾವು ಸಿದ್ಧರಾಗಿದ್ದೇವೆ ಎಂಬ ಸಂದೇಶವನ್ನು ಕೂಡ ರವಾನಿಸಿದೆ.

ಇದನ್ನೂ ಓದಿ:

ಜಗತ್ತಿನ ತೈಲ ಸಾಗಣೆಗೆ ಅತ್ಯಂತ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ ಇದೀಗ ಉದ್ವಿಗ್ನತೆಯ ಕೇಂದ್ರಬಿಂದುವಾಗಿದೆ. ಈ ಪ್ರದೇಶದಲ್ಲಿ ಯಾವುದೇ ಸೇನಾ ಚಟುವಟಿಕೆ ಹೆಚ್ಚಾದರೆ ಜಾಗತಿಕ ತೈಲ ಪೂರೈಕೆ ಮತ್ತು ಬೆಲೆಗಳ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಉಭಯ ರಾಷ್ಟ್ರಗಳು ತಮ್ಮ ಸೇನಾ ಸಿದ್ಧತೆಯನ್ನು ಹೆಚ್ಚಿಸಿಕೊಂಡಿರುವುದರಿಂದ ಪರಿಸ್ಥಿತಿ ಸೂಕ್ಷ್ಮವಾಗಿದೆ. ಮಾತುಕತೆಗಳ ಮೂಲಕ ಉದ್ವಿಗ್ನತೆ ಶಮನವಾಗಬೇಕೆಂಬ ಆಸೆಯಿದ್ದರೂ, ನೆಲಮಟ್ಟದ ಬೆಳವಣಿಗೆಗಳು ಆತಂಕವನ್ನು ಇನ್ನಷ್ಟು ಹೆಚ್ಚಿಸುತ್ತಿವೆ.

Must Read