ಹೊಸ ದಿಗಂತ ಡಿಜಿಟಲ್ ಡೆಸ್ಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ದಾಳಿಗೆ ಮುಂಬೈ ಇಂಡಿಯನ್ಸ್ ಮತ್ತೆ ಎಡವಿದ್ದು, 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 166 ರನ್ಗಳ ಸಾಧಾರಣ ಮೊತ್ತ ದಾಖಲಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಮುಂಬೈಗೆ ಮತ್ತೆ ಕಳಪೆ ಆರಂಭ ಸಿಕ್ಕಿದ್ದು, ಮೊದಲ ಓವರ್ನಲ್ಲೇ ರಿಕಲ್ಟನ್ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 22 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ಸೂರ್ಯಕುಮಾರ್ ಮತ್ತೆ ನಿರಾಸೆ ಮೂಡಿಸಿದ್ದು, ಖಾತೆ ತೆರೆಯದೇ ನಿರ್ಗಮಿಸಿದರು.
ಈ ವೇಳೆ ತಂಡಕ್ಕೆ ಆಸರೆಯಾದ ನಮನ್ ಧೀರ್- ತಿಲಕ್ ವರ್ಮಾ 3ನೇ ವಿಕೆಟ್ ಜೊತೆಯಾಟದಲ್ಲಿ 82 ರನ್ಗಳ ಜೊತೆಯಾಟ ನೀಡಿದರು. ನಮನ್ ಧೀರ್ 32 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ಗಳ ಸಹಿತ 47 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ವಿಲ್ ಜಾಕ್ಸ್10 ರನ್ ಗಳಿಸಿ ಕ್ಯಾಚ್ ನೀಡಿದರು. ರಾಜ್ ಅಂಗದ್ ಭಾವಾ 16 ರನ್ ಗೆ ಔಟಾದರು.
ಒಂದೆಡೆ ವಿಕೆಟ್ ಉರುಳುತ್ತಿದ್ದರೆ, ಅತ್ತ ತಿಲಕ್ 4 ಬೌಂಡರಿ, 2 ಸಿಕ್ಸರ್ ಸಹಿತ 57 ರನ್ಗಳಿಸಿ ತಂಡಕ್ಕೆ ಆಸರೆಯಾದರು.



