May 11, 2026
Monday, May 11, 2026
spot_img

WEATHER | ಕರ್ನಾಟಕದ 22 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ: ದಕ್ಷಿಣ ಒಳನಾಡಿನಲ್ಲಿ ‘ಯೆಲ್ಲೋ ಅಲರ್ಟ್’

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ವಿಪತ್ತು ನಿರ್ವಹಣಾ ಪ್ರಾಧಿಕಾರವು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಂಭವವಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಸುಮಾರು 64.5 ಮಿ.ಮೀ ಇಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 9 ಮತ್ತು 10ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ಆದರೆ ಉತ್ತರ ಕನ್ನಡದಲ್ಲಿ ಶುಷ್ಕ ಹವಾಮಾನ ಮುಂದುವರಿಯಲಿದೆ.

ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !