September 10, 2026
Thursday, September 10, 2026
spot_img

ಸೇತುವೆ ಬಳಿ ಗಾಡಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಕಲಬುರಗಿಯ ಯುವಕ, ಕಾರಣ ಏನು?

ಹೊಸದಿಗಂತ ವರದಿ ಕಲಬುರಗಿ:

ಜಿಲ್ಲೆಯ ಕಮಲಾಪೂರ್ ತಾಲೂಕಿನ ಕುರಿಕೋಟಾ ಗ್ರಾಮದ ಬಳಿ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಮರನಾಥ ದೊಡ್ಡಮನಿ (30) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಇವರು ಮೂಲತಃ ಶಹಬಾದ್ ತಾಲೂಕಿನ ನಂದೂರ್ ಗ್ರಾಮದ ನಿವಾಸಿಯಾಗಿದ್ದರು ಎಂದು ತಿಳಿದುಬಂದಿದೆ.

ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಅಮರನಾಥ, ಬಳಿಕ ಕುರಿಕೋಟಾ ಸೇತುವೆ ಬಳಿ ವಾಹನ ನಿಲ್ಲಿಸಿ ಸೇತುವೆ ಮೇಲಿಂದ ಜಿಗಿದಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದ್ದಾರೆ.

ಈ ಸಂಬಂಧ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !