ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತ್ರಿಶಾ ಅವರು ನೀಲಿ ಬಣ್ಣದ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ಗೆ “The Love Is Always Louder” ಎಂಬ ಕ್ಯಾಪ್ಷನ್ ನೀಡಿದ್ದಾರೆ. ಇದು ಅಭಿಮಾನಿಗಳ ಸಂಭ್ರಮವನ್ನು ಉದ್ದೇಶಿಸಿ ಹೇಳಿದ್ದೋ ಅಥವಾ ವಿಜಯ್ ಮೇಲಿನ ಅಭಿಮಾನವೋ ಎಂಬ ಚರ್ಚೆ ಈಗ ಸೋಶಿಯಲ್ ಮೀಡಿಯಾದಲ್ಲಿ ಗರಿಗೆದರಿದೆ.


ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಐತಿಹಾಸಿಕ ಸಮಾರಂಭಕ್ಕೆ ತ್ರಿಶಾ ತಮ್ಮ ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ್ದರು. ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಶಾ ಅವರನ್ನು ಕಂಡ ಅಭಿಮಾನಿಗಳು ಹರ್ಷೋದ್ಗಾರ ಮಾಡಿದರು. ಅವರು ಕ್ರೀಡಾಂಗಣಕ್ಕೆ ಪ್ರವೇಶಿಸುವ ಮತ್ತು ಅಭಿಮಾನಿಗಳತ್ತ ಕೈಬೀಸುವ ವಿಡಿಯೋಗಳು ಈಗಾಗಲೇ ಇಂಟರ್ನೆಟ್‌ನಲ್ಲಿ ವೈರಲ್ ಆಗಿವೆ.

ಈ ಸಮಾರಂಭದ ಬೆನ್ನಲ್ಲೇ ಮತ್ತೊಂದು ಕುತೂಹಲಕಾರಿ ವದಂತಿ ಹಬ್ಬಿದೆ. ವಿಜಯ್ ಅವರು ಈ ಚುನಾವಣೆಯಲ್ಲಿ ತಿರುಚ್ಚಿ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ನಿಯಮದ ಪ್ರಕಾರ ಅವರು ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ. ಹೀಗೆ ತೆರವಾಗುವ ಕ್ಷೇತ್ರದಲ್ಲಿ ಟಿವಿಕೆ ಪಕ್ಷದ ಅಭ್ಯರ್ಥಿಯಾಗಿ ತ್ರಿಶಾ ಕಣಕ್ಕಿಳಿಯಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ತ್ರಿಶಾ ಅಥವಾ ವಿಜಯ್ ಅವರ ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.



