May 11, 2026
Monday, May 11, 2026
spot_img

ಮಂಡ್ಯದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯದ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.

ಯರಗನಹಳ್ಳಿ ಬಳಿಯ ಕೆರೆಯಲ್ಲಿ ಆಡಲು ಹೋಗಿದ್ದ ಪ್ರಕಾಶ್‌ ಗೌಡ ಹಾಗೂ ಯಶಸ್‌ ಮೃತರು.

ತಮ್ಮ ಸ್ನೇಹಿತರ ಜೊತೆ ಈಜಾಡಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆಯಲು ಸಹಾಯ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ನೀರಿನಲ್ಲಿ ಹೇಗೆ ಮುಳುಗಿದರು? ಯಾರೆಲ್ಲ ಇದ್ದರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !