ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ದಳಪತಿ ವಿಜಯ್ ನೂತನ ಮುಖ್ಯಮಂತ್ರಿಯಾಗುವ ಮೂಲಕ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು, ಈ ಮೂಲಕ ದಶಕಗಳ ಕಾಲದ ಡಿಎಂಕೆ ಆಳ್ವಿಕೆ ಅಂತ್ಯವಾಗಿದೆ. ಇತ್ತ ವಿಜಯ್ ಅವರು, ಪ್ರಮಾಣವಚನ ಸ್ವೀಕರಿಸಿದ 48 ಗಂಟೆಯೊಳಗೆ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ.
ಚೆನ್ನೈನ ಆಳ್ವಾರ್‌ಪೇಟೆಯಲ್ಲಿರುವ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ ವಿಜಯ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಸ್ಟಾಲಿನ್ ಅವರು ವಿಜಯ್ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು.
ಈ ಭೇಟಿಯ ವೇಳೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.



