May 11, 2026
Monday, May 11, 2026
spot_img

ಯುರೋಪ್ T20 ಲೀಗ್‌ಗೆ ಎಂಟ್ರಿ ಕೊಟ್ಟ ದ್ರಾವಿಡ್: ಕ್ಯಾಪ್ಟನ್ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇದೀಗ ಕ್ರಿಕೆಟ್ ಲೋಕದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಐಪಿಎಲ್ ಹಾಗೂ ಭಾರತ ತಂಡದ ಕೋಚಿಂಗ್ ಜವಾಬ್ದಾರಿಯಿಂದ ದೂರವಾದ ಬಳಿಕ ದ್ರಾವಿಡ್ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್‌ನಲ್ಲಿ ತಂಡದ ಸಹ ಮಾಲೀಕರಾಗಿ ಕಾಣಿಸಿಕೊಂಡಿದ್ದಾರೆ. ಐರ್ಲೆಂಡ್‌ನಲ್ಲಿ ನಡೆಯಲಿರುವ ಈ ಲೀಗ್‌ನಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡದೊಂದಿಗೆ ಅವರು ಕೈಜೋಡಿಸಿದ್ದಾರೆ.

ಭಾರತೀಯ ಕಂಪನಿಯ ಒಡೆತನದಲ್ಲಿರುವ ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ನಾಯಕನಾಗಿ ನೇಮಿಸಲಾಗಿದೆ. ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಅಶ್ವಿನ್ ಇದೀಗ ಜಾಗತಿಕ ಟಿ20 ಲೀಗ್‌ಗಳಲ್ಲಿ ಆಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:

ಈ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ್, ಯುರೋಪ್‌ನಲ್ಲಿ ಕ್ರಿಕೆಟ್ ವೇಗವಾಗಿ ಬೆಳೆಯುತ್ತಿರುವುದು ಸಂತಸದ ವಿಚಾರ ಎಂದಿದ್ದಾರೆ. ಅಲ್ಲಿನ ಆಟಗಾರರ ಉತ್ಸಾಹ ಮತ್ತು ಅಭಿಮಾನಿಗಳ ಬೆಂಬಲ ವಿಶೇಷ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ.

ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್‌ಲ್ಯಾಂಡ್ಸ್ ಕ್ರಿಕೆಟ್ ಮಂಡಳಿಗಳ ಸಹಯೋಗದಲ್ಲಿ ನಡೆಯಲಿರುವ ಈ ಲೀಗ್‌ನಲ್ಲಿ ಡಬ್ಲಿನ್, ಆಮ್ಸ್ಟರ್‌ಡ್ಯಾಮ್, ಗ್ಲ್ಯಾಸ್ಗೋ ಸೇರಿದಂತೆ ಆರು ತಂಡಗಳು ಭಾಗವಹಿಸಲಿವೆ. ಆಗಸ್ಟ್ 26ರಿಂದ ಸೆಪ್ಟೆಂಬರ್ 20ರವರೆಗೆ ಪಂದ್ಯಾವಳಿ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !