ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಪಂಜಾಬ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿದೆ. ಈ ಮೂಲಕ ಡೆಲ್ಲಿ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದೆ.
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದಿದ್ದ ಪಂಜಾಬ್ ಗೆ ಉತ್ತಮ ಆರಂಭ ಸಿಕ್ಕಿತು. ಪ್ರಿಯಾಂಶ್ ಆರ್ಯ ಸ್ಫೋಟಕ ಬ್ಯಾಟಿಂಗ್ ನಡೆಸಿ ಅರ್ಧಶತಕ ಸಿಡಿಸಿದರು. ಮೊದಲ ವಿಕೆಟ್ ನಲ್ಲಿ ಪ್ರಭಸಿಮ್ರನ್ ಜೊತೆ ಸೇರಿ 78 ರನ್‌ಗಳ ಜೊತೆಯಾಟ ನಡೆಸಿದರು.
ಪ್ರಭಸಿಮ್ರನ್ ಕೇವಲ 18 ರನ್‌ಗಳಿಸಿ ಕ್ಯಾಚ್ ನೀಡಿ ಔಟ್ ಆದರು. ಇದರ ಬೆನ್ನಲ್ಲೇ 56 ಗಳಿಸಿದ್ದ ಪ್ರಿಯಾಂಶ್ ಆರ್ಯ ವಿಕೆಟ್ ಒಪ್ಪಿಸಿದರು.
3ನೇ ವಿಕೆಟ್‌ಗೆ ಒಂದಾದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಕೊನೊಲಿ 83 ರನ್‌ಗಳ ಜೊತೆಯಾಟ ನೀಡಿದರು. ಕೊನೊಲಿ 38 ರನ್‌ಗಳಿಸಿದರು. ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್‌ಗಳ ಸಹಿತ ಅಜೇಯ 59 ರನ್‌ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಶೆಡ್ಗೆ ಅಜೇಯ 21 ರನ್‌ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸಿದರು.



