May 12, 2026
Tuesday, May 12, 2026
spot_img

ಜಾಗತಿಕ ಬಿಕ್ಕಟ್ಟಿನ ನಡುವೆ ‘ವೋಕಲ್ ಫಾರ್ ಲೋಕಲ್’ ಮಂತ್ರ ಜಪಿಸಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಆರ್ಥಿಕ ಪರಿಸ್ಥಿತಿ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಕಳೆದ ಕೆಲವು ವರ್ಷಗಳಿಂದ ವಿಶ್ವ ಅಸ್ಥಿರ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದು, ಈಗಿನ ಪಶ್ಚಿಮ ಏಷ್ಯಾ ಉದ್ವಿಗ್ನತೆ ಈ ದಶಕದ ದೊಡ್ಡ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ ದೇಶದ ಜನರು ವಿದೇಶಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ, ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.

ಇದನ್ನೂ ಓದಿ:

ಭಾರತವು ಅನೇಕ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲು ಅಪಾರ ಪ್ರಮಾಣದ ವಿದೇಶಿ ವಿನಿಮಯ ಖರ್ಚು ಮಾಡುತ್ತಿದೆ. ಹೀಗಾಗಿ, ಅನಗತ್ಯ ಆಮದು ಅವಲಂಬನೆ ಕಡಿಮೆ ಮಾಡುವುದು ಅಗತ್ಯವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟರು. ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಜನರು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.

ಕೊರೊನಾ ಸವಾಲನ್ನು ದೇಶ ಒಗ್ಗಟ್ಟಿನಿಂದ ಎದುರಿಸಿದಂತೆ, ಈಗಿನ ಜಾಗತಿಕ ಬಿಕ್ಕಟ್ಟನ್ನೂ ಭಾರತ ಯಶಸ್ವಿಯಾಗಿ ಎದುರಿಸಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !