May 12, 2026
Tuesday, May 12, 2026
spot_img

ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಮೋದಿ ಬೆಂಗಳೂರು ಭೇಟಿ: ಸಿದ್ದರಾಮಯ್ಯ–ಜೋಶಿ ಸಾಹೇಬ್ರ ನಡುವೆ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕರ್ನಾಟಕ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ.

ಪ್ರಧಾನಿ ಭಾಷಣವನ್ನು “ಸುಳ್ಳು ಮತ್ತು ದ್ವೇಷಪೂರ್ಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿ-ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜೋಶಿ ಅವರ ಪ್ರಕಾರ, ಕಾಂಗ್ರೆಸ್ ಸರ್ಕಾರ ರಾಜ್ಯವನ್ನು “ಗ್ಯಾರಂಟಿ ಹೆಸರಿನಲ್ಲಿ ಸಾಲದ ಬಲೆಗೆ” ತಳ್ಳಿದೆ. ರಸ್ತೆ ಗುಂಡಿಗಳು, ಅಭಿವೃದ್ಧಿ ನಿಧಾನಗತಿ ಮತ್ತು ಗುತ್ತಿಗೆದಾರರಿಗೆ ಬಾಕಿ ಪಾವತಿಯಾಗದ ಪರಿಸ್ಥಿತಿ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಜೊತೆಗೆ, ಹಾಲು, ವಿದ್ಯುತ್, ಇಂಧನ ಸೇರಿದಂತೆ ಸುಮಾರು 48 ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಜನರಿಗೆ ಗ್ಯಾರಂಟಿ ನೀಡುತ್ತಿರುವುದಾಗಿ ಹೇಳುವ ಕಾಂಗ್ರೆಸ್, ವಾಸ್ತವದಲ್ಲಿ ಬೆಲೆ ಏರಿಕೆಯ ಭಾರವನ್ನು ಜನರ ಮೇಲೆ ಹಾಕುತ್ತಿದೆ ಎಂದು ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿಗಿಂತ ಆಂತರಿಕ ಅಧಿಕಾರ ಹಂಚಿಕೆ ಕಿತ್ತಾಟವೇ ಹೆಚ್ಚಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಸಚಿವರು ಶಾಸಕರ ಸಂಖ್ಯಾ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಜಾಗತಿಕ ಆರ್ಥಿಕತೆಯಲ್ಲಿ ಮುನ್ನಡೆ ಸಾಧಿಸಿದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಟೀಕೆ ಮಾಡುವ ಮುನ್ನ ತಮ್ಮ ಸರ್ಕಾರದ ಆಡಳಿತ ವೈಫಲ್ಯಗಳಿಗೆ ಉತ್ತರ ನೀಡಬೇಕು ಎಂದು ಅವರು ಸವಾಲು ಹಾಕಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !