May 12, 2026
Tuesday, May 12, 2026
spot_img

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೇ.12.5 ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಾರಿಗೆ ನೌಕರರಿಗೆ ಕೊನೆಗೂ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದರು. ಇದೀಗ ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಬಳಿಕ ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ 1.05 ಲಕ್ಷ ಸಿಬ್ಬಂದಿಗೆ ಲಾಭವಾಗಲಿದೆ.

2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇಕಡಾ 12.5 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಹೊಸ ವೇತನವು 2026 ಜುಲೈ 1ರ ವೇತನದಲ್ಲಿ ಅನುಷ್ಠಾನಗೊಳಿಸಿ ಪಾವತಿಗೆ ಆದೇಶ ಹೊರಡಿಸಿದೆ.

ಆದ್ರೆ, ಸಾರಿಗೆ ನೌಕರರು ಶೇ.25 ರಷ್ಟು ವೇತನ ಪರಿಷ್ಕರಣೆಗೆ ಒತ್ತಾಯಿಸಿದ್ದವು. ವೇತನ ಪರಿಷ್ಕರಣೆ ಮಾಡದಿದ್ದರೆ ಮುಷ್ಕರ ಮಾಡಲು ನಿರ್ಧರಿಸಿದ್ದವು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !