September 10, 2026
Thursday, September 10, 2026
spot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಸಣ್ಣ ನೀರಾವರಿ ಸಚಿವ ಬೋಸರಾಜು ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜು ಅವರು ಮಂಗಳವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರುಶನ ಪಡೆದರು.

ದೇಗುಲಕ್ಕೆ ಆಗಮಿಸಿದ ಸಚಿವರನ್ನು ಶಾಸಕಿ ಭಾಗೀರಥಿ ಮುರುಳ್ಯ ಮತ್ತು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ದೇವಳದ ಅರ್ಚಕ ರಾಜೇಶ್ ನಡ್ಯಂತಿಲ್ಲಾಯ ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಸಚಿವರು ಹೊಸಳಿಗಮ್ಮನ ದರುಶನ ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !