May 13, 2026
Wednesday, May 13, 2026
spot_img

ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ: ಓರ್ವ ವ್ಯಕ್ತಿ ಬಂಧನ

ಹೊಸ ದಿಗಂತ ವರದಿ,ಬೆಳಗಾವಿ:

ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ‌ ದಾಳಿ ನಡೆಸಿ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

ಬೆಳಗಾವಿಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ NH-48 ರ ಸರ್ವಿಸ್ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ.

ಆರೋಪಿ ಸೈಯ್ಯದ್ ನಿಸಾರ್ ಮಹಾರಾಷ್ಟ್ರದ ನಿವಾಸಿಯಾಗಿದ್ದು, 3,05,000 ಮೌಲ್ಯದ ಸುಮಾರು 6 ಕೆಜಿ 145 ಗ್ರಾಂ ಗಾಂಜಾ, ವಿವೋ ಮೊಬೈಲ್ ಫೋನ್ ಸೇರಿದಂತೆ ಒಟ್ಟು ಸುಮಾರು 3,10,000 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.‌

ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ, ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಯ ನೇತ್ರತ್ವದಲ್ಲಿ ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಪೊಲೀಸರ ಈ‌ ಕಾರ್ಯಾಚರಣೆಗೆ ಬೆಳಗಾವಿ ನಗರ ಪೊಲೀಸ್‌ ಆಯುಕ್ತರು ಹಾಗೂ ಡಿಸಿಪಿ ಅವರು ಶ್ಲಾಘಿನಿಯ ವ್ಯಕ್ತಪಡಿಸಿದ್ದಾರೆ.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !