May 13, 2026
Wednesday, May 13, 2026
spot_img

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.

ದ.ಕ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ ಮೊದಲಾದ ಕಡೆಗಳಲ್ಲಿ ಗುಡುಗು ಸಿಡಿಲಾರ್ಭಟಗಳೊಂದಿಗೆ ಮಳೆಯಾಗುತ್ತಿದೆ. ಅಲ್ಲಲ್ಲಿ ರಸ್ತೆ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು. ಗಾಳಿ ಮಳೆಯಿಂದಾಗಿ ಜಿಲ್ಲೆಯ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಉಡುಪಿ ನಗರ, ಕಟಪಾಡಿ, ಶಂಕರಪುರ, ಶಿರ್ವ, ಅಲೆವೂರು, ಹಿರಿಯಡ್ಕ, ಪೆಣಂಕಿಲ, ಮೂಡಬೆಳ್ಳೆ, ಬ್ರಹ್ಮಾವರ ಹಾಗೂ ಕಾಪು ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳನ್ನು ವ್ಯಾಪಿಸಿತು. ಗಾಳಿಯ ತೀವ್ರತೆಗೆ ಹಲವೆಡೆ ವಿದ್ಯುತ್ ಕಂಬಗಳು ನೆಲಸಮಗೊಂಡಿದ್ದು, ರಾತ್ರಿಯಿಡೀ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಕತ್ತಲಲ್ಲಿ ಕಾಲ ಕಳೆಯುವಂತಾಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !