May 13, 2026
Wednesday, May 13, 2026
spot_img

WEATHER | ಇನ್ನೂ ಮೂರು ದಿನ ಭಾರೀ ಮಳೆಯ ಎಚ್ಚರಿಕೆ, ಈ ಜಿಲ್ಲೆಯ ಜನರಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಎಫೆಕ್ಟ್‌ ಇದಾಗಿದೆ.

ಹವಾಮಾನದಲ್ಲಿ ವಿಭಿನ್ನ ಬದಲಾವಣೆ ಕಾಣಿಸಿದ್ದು, ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಾಳೆ ಹಾಗೂ ನಾಡಿದ್ದು ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಸಹಿತ ಮಳೆ, ನಾಡಿದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆ ಬೀಳಲಿದೆ.

ನಾಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳದಲ್ಲಿ ಮಳೆ ನೀಳಲಿದೆ. ಶಿವಮೊಗ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿಯಲ್ಲಿ ದಟ್ಟ ಆಲಿಕಲ್ಲು ಸಹಿತ ಮಳೆ ಬೀಳಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !