ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಲೂಟಿ ಜಲಾಶಯದಲ್ಲಿ ಅಣೆಕಟ್ಟಿನ ಸಣ್ಣಭಾಗವೊಂದು ಕುಸಿದ ಪರಿಣಾಮ ಪ್ರವಾಹ ಉಂಟಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಲರಾಂಪುರ ಜಿಲ್ಲೆಯ ಧನೇಶ್‌ಪುರ್ ಗ್ರಾಮದಲ್ಲಿರುವ ಲೂಟಿ ಜಲಾಶಯದಲ್ಲಿ ಮಂಗಳವಾರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಈ ವೇಳೆ ಅಣೆಕಟ್ಟು ಕುಸಿದು ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ ಕೊರ್ಕೊಮಾ ಗ್ರಾಮದ ನಿವಾಸಿಗಳಾದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಂಟಾದ ಪ್ರವಾಹದಿಂದಾಗಿ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ನುಗ್ಗಿ ಹಾನಿಗೊಳಗಾಗಿವೆ. 25ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಗ್ರಾಮಸ್ಥರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಪ್ರ