May 13, 2026
Wednesday, May 13, 2026
spot_img

ಸಿಎಂ ವಿಜಯ್ ಯಿಂದ ನಟಿ ತ್ರಿಶಾಗೆ ಬಿಗ್‌ ಗಿಫ್ಟ್‌: `ಕರುಪ್ಪ್’ ಚಿತ್ರದ ಮಾರ್ನಿಂಗ್ ಶೋಗೆ ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ವಿಜಯ್ ಅವರು ಸಿನಿಮಾ ಕ್ಷೇತ್ರಕ್ಕೆ ಸಂಬಂಧಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ನಟಿ ತ್ರಿಶಾ ಮತ್ತು ಸೂರ್ಯ ಅಭಿನಯದ `ಕರುಪ್ಪ್’ ಚಿತ್ರದ ಬೆಳಗ್ಗೆ 9 ಗಂಟೆಯ ಫಸ್ಟ್ ಶೋಗೆ ಅನುಮತಿ ನೀಡಿದ್ದು, ಈ ಮೂಲಕ ತಮಿಳು ಚಲನಚಿತ್ರೋದ್ಯಮಕ್ಕೆ ಬೆಂಬಲ ನೀಡಿದ್ದಾರೆ.

ಮೇ 14 ರಂದು ಆರ್ ಜೆ ಬಾಲಾಜಿ ನಿರ್ದೇಶನದ ಆಕ್ಷನ್ ಸಿನಿಮಾ ಕರುಪ್ಪ್ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇತ್ತ ಕರುಪ್ಪ್ ಸಿನಿಮಾಗೆ ಸಿಎಂ ವಿಜಯ್ ದಿನಕ್ಕೆ 5 ಶೋಗಳಿಗೆ ಅನುಮತಿ ನೀಡಿದ್ದಾರೆ. ಜೊತೆಗೆ ಚಿತ್ರಮಂದಿರದ ಮಾಲೀಕರು ಜನದಟ್ಟಣೆಯನ್ನು ನಿಯಂತ್ರಿಸಲು ಸೂಚಿಸಿದ್ದಾರೆ.

ಈ ಹಿಂದೆ ತಮಿಳುನಾಡಿನಲ್ಲಿ ಬೆಳಗ್ಗೆ 9 ಗಂಟೆ ಮೊದಲು ಚಿತ್ರಮಂದಿಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಸಿಎಂ ಆಗಿ ಅಧಿಕಾರಕ್ಕೇರಿದ ಬೆನ್ನಲ್ಲೇ ಮಾರ್ನಿಂಗ್ ಶೋ ಗಳಿಗೆ ಅನುಮತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !