July 6, 2026
Monday, July 6, 2026
spot_img

ಬೆಂಗಳೂರಿಗರಿಗೆ ಬೆಲೆ ಏರಿಕೆ ಶಾಕ್: ಅಡುಗೆ ಎಣ್ಣೆ ಬೆನ್ನಲ್ಲೇ ಈಗ ಅಕ್ಕಿ ದರವೂ ಫುಲ್ ಕಾಸ್ಟ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸಾಮಾನ್ಯ ಜನರ ಜೇಬಿಗೆ ಬೆಲೆ ಏರಿಕೆಯ ಬಿಸಿ ದಟ್ಟವಾಗಿ ತಟ್ಟುತ್ತಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಯ ದರ ಏರಿಕೆಯಾಗಿ ಜನಸಾಮಾನ್ಯರು ಕಂಗೆಟ್ಟಿದ್ದರೆ, ಈಗ ದೈನಂದಿನ ಆಹಾರದ ಅವಿಭಾಜ್ಯ ಅಂಗವಾದ ಅಕ್ಕಿಯ ಬೆಲೆಯೂ ಗಗನಕ್ಕೇರಲು ಸಜ್ಜಾಗಿದೆ. ಸಿಲಿಕಾನ್ ಸಿಟಿಯಲ್ಲಿ ಅಕ್ಕಿ ಕೊರತೆ ಮತ್ತು ರಫ್ತು ಪ್ರಮಾಣದ ಏರಿಕೆಯಿಂದಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಪ್ರತಿ ಕೆಜಿಗೆ 4 ರಿಂದ 5 ರೂಪಾಯಿ ಏರಿಕೆ. ಒಂದು ಚೀಲ ಅಕ್ಕಿಯ ಮೇಲೆ ಸುಮಾರು 55 ರಿಂದ 60 ರೂಪಾಯಿ ಹೆಚ್ಚಳವಾಗಲಿದೆ.

ಪ್ರತಿ ಕೆಜಿಗೆ 8 ರಿಂದ 10 ರೂಪಾಯಿ ಏರಿಕೆ. ಚಿಲ್ಲರೆ ಅಂಗಡಿಗಳಲ್ಲಿ ಒಂದು ಚೀಲ ಅಕ್ಕಿ ಖರೀದಿಸುವಾಗ ಗ್ರಾಹಕರು 60 ರಿಂದ 80 ರೂಪಾಯಿ ಹೆಚ್ಚುವರಿ ಹಣ ನೀಡಬೇಕಾಗುತ್ತದೆ.

ಬೆಲೆ ಏರಿಕೆಗೆ ಕಾರಣಗಳೇನು?

ಭಾರತದಿಂದ ಶ್ರೀಲಂಕಾ ಸೇರಿದಂತೆ ವಿದೇಶಗಳಿಗೆ ಅಕ್ಕಿ ರಫ್ತು ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಲ್ಲಿಂದ ಇತರೆ ದೇಶಗಳಿಗೂ ಅಕ್ಕಿ ಸರಬರಾಜಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ದಾಸ್ತಾನು ಕಡಿಮೆಯಾಗಿದೆ. ಕೃಷಿ ಉತ್ಪನ್ನಗಳ ಕಚ್ಚಾ ವಸ್ತುಗಳ ಕೊರತೆಯಿಂದಾಗಿ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಸಗಟು ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಲೀಟರ್‌ಗೆ 3 ರೂ. ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ 5 ರಿಂದ 10 ರೂಪಾಯಿವರೆಗೆ ಏರಿಕೆಯಾಗಿದೆ. ಇದರೊಂದಿಗೆ ಆಟೋ ಎಲ್‌ಪಿಜಿ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆಗಳೂ ಹೆಚ್ಚಾಗಿರುವುದು ಜನಸಾಮಾನ್ಯರ ಮಾಸಿಕ ಬಜೆಟ್ ಅನ್ನು ಏರುಪೇರು ಮಾಡಿದೆ.

ಈ ತಿಂಗಳ ಅಂತ್ಯದ ವೇಳೆಗೆ ಅಕ್ಕಿ ಬೆಲೆ ಮತ್ತಷ್ಟು ಏರಿಕೆಯಾಗುವ ಲಕ್ಷಣಗಳಿವೆ. ಸಗಟು ಮಾರುಕಟ್ಟೆಯಲ್ಲಿ ಮತ್ತೆ 4-5 ರೂಪಾಯಿಗಳಷ್ಟು ದರ ಹೆಚ್ಚಳವಾಗಬಹುದು ಎಂದು ವ್ಯಾಪಾರಿಗಳು ಮುನ್ಸೂಚನೆ ನೀಡಿದ್ದಾರೆ. ಹಬ್ಬದ ಸೀಸನ್ ಆರಂಭವಾಗುತ್ತಿರುವ ಸಂದರ್ಭದಲ್ಲೇ ಈ ಬೆಲೆ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !