May 14, 2026
Thursday, May 14, 2026
spot_img

ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ರದ್ದು ಬೆನ್ನಲ್ಲೇ ಕೇಂದ್ರದ ವಿರುದ್ಧ ಸಿಎಂ ಗರಂ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂದ ಸಿದ್ದರಾಮಯ್ಯ

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ್ದ ನೀಟ್-ಯುಜಿ 2026 ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಜಕೀಯ ವಾತಾವರಣವೂ ತೀವ್ರಗೊಂಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಪರೀಕ್ಷೆ ಬರೆದಿದ್ದರು. ಪೋಷಕರು ತರಬೇತಿ, ಪ್ರಯಾಣ ಸೇರಿದಂತೆ ಅಪಾರ ವೆಚ್ಚ ಮಾಡಿದ್ದರು. ಆದರೆ ಕೇಂದ್ರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಗೆ ತಳ್ಳಲ್ಪಟ್ಟಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:

2024ರಲ್ಲೇ ನೀಟ್ ಪರೀಕ್ಷೆ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಸದನದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಈಗಿನ ಬೆಳವಣಿಗೆ ಆ ಆತಂಕ ಸತ್ಯವಾಗಿರುವುದನ್ನು ತೋರಿಸಿದೆ ಎಂದು ಹೇಳಿದ್ದಾರೆ.

ಪೇಪರ್ ಲೀಕ್ ಪ್ರಕರಣಗಳು ಮೋದಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದ ಸಿಎಂ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಹೊಸ ಪರೀಕ್ಷಾ ದಿನಾಂಕದ ಕುರಿತು ಕೂಡಲೇ ಸ್ಪಷ್ಟನೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !