July 6, 2026
Monday, July 6, 2026
spot_img

ದೆಹಲಿ ಸರ್ಕಾರದ ಹೊಸ ರೂಲ್ಸ್: ವಾರದಲ್ಲಿ ಎರಡು ದಿನ WFH, ಮೆಟ್ರೋ ಪ್ರಯಾಣ ಕಡ್ಡಾಯವಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಇಂಧನ ಬಳಕೆ ಕಡಿಮೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯ ಬೆನ್ನಲ್ಲೇ ದೆಹಲಿ ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ.

ಇಂಧನ ಉಳಿತಾಯ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಸರ್ಕಾರ ಸರ್ಕಾರಿ ನೌಕರರಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

ಗುರುವಾರ ನಡೆದ ಘೋಷಣೆಯ ಪ್ರಕಾರ, ಸರ್ಕಾರಿ ನೌಕರರು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಪಡೆಯಲಿದ್ದಾರೆ. ಈ ಹೊಸ ವ್ಯವಸ್ಥೆ ಶುಕ್ರವಾರದಿಂದಲೇ ಜಾರಿಗೆ ಬರಲಿದೆ. ಜೊತೆಗೆ ವಾಹನ ಬಳಕೆಯನ್ನು ಕಡಿಮೆ ಮಾಡಲು ಸರ್ಕಾರ “ಮೇರಾ ಭಾರತ್, ಮೇರಾ ಯೋಗದಾನ್” ಅಭಿಯಾನ ಆರಂಭಿಸಿದೆ.

ಇದನ್ನೂ ಓದಿ:

ಪ್ರತಿ ಸೋಮವಾರವನ್ನು “ಮೆಟ್ರೋ ಸೋಮವಾರ” ಎಂದು ಆಚರಿಸಲು ನಿರ್ಧರಿಸಲಾಗಿದ್ದು, ಸಚಿವರು, ಅಧಿಕಾರಿಗಳು ಹಾಗೂ ಸರ್ಕಾರಿ ಸಿಬ್ಬಂದಿ ಕಡ್ಡಾಯವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕರೂ ವಾರದಲ್ಲಿ ಕನಿಷ್ಠ ಒಂದು ದಿನ ವಾಹನ ರಹಿತ ದಿನ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ.

ಮುಂದಿನ ಆರು ತಿಂಗಳ ಕಾಲ ಯಾವುದೇ ಹೊಸ ಪೆಟ್ರೋಲ್, ಡೀಸೆಲ್ ಅಥವಾ ಎಲೆಕ್ಟ್ರಿಕ್ ವಾಹನ ಖರೀದಿಸದಂತೆ ಸರ್ಕಾರ ನಿರ್ಧರಿಸಿದೆ. ಜೊತೆಗೆ ಸರ್ಕಾರಿ ನೌಕರರ ಸಾರಿಗೆ ಭತ್ಯೆಯನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ.

ವಿದ್ಯುತ್ ಉಳಿತಾಯಕ್ಕಾಗಿ ಸರ್ಕಾರಿ ಕಚೇರಿಗಳ ಏರ್ ಕಂಡೀಷನರ್‌ಗಳನ್ನು 24 ರಿಂದ 26 ಡಿಗ್ರಿ ಸೆಲ್ಸಿಯಸ್ ನಡುವೆ ಮಾತ್ರ ಬಳಸಲು ಸೂಚಿಸಲಾಗಿದೆ. ವಿದೇಶಿ ಅಧಿಕೃತ ಪ್ರವಾಸಗಳಿಗೂ ಒಂದು ವರ್ಷದ ನಿರ್ಬಂಧ ಹೇರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !