September 10, 2026
Thursday, September 10, 2026
spot_img

ಪ್ಲೇ-ಆಫ್ ಉಳಿಸಿಕೊಳ್ಳಲು CSK ‘ಮಾಡು ಇಲ್ಲವೇ ಮಡಿ’ ಹೋರಾಟ: ಟಾಸ್ ಗೆದ್ದವನೇ ಬಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಪಂದ್ಯದಲ್ಲಿ ಇಂದು ಹಳದಿ ಸೈನ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಲಕ್ನೋದ ಪ್ರಸಿದ್ಧ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದು ಅತ್ಯಂತ ನಿರ್ಣಾಯಕ ದಿನ. ಟೂರ್ನಿಯ ಆರಂಭದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಸಿಎಸ್‌ಕೆ, ಆ ಬಳಿಕ ಸತತ ಗೆಲುವಿನ ಲಯಕ್ಕೆ ಮರಳಿ ಅಬ್ಬರಿಸುತ್ತಿದೆ. ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಚೆನ್ನೈ ತಂಡಕ್ಕೆ ಪ್ಲೇ-ಆಫ್ ತಲುಪಲು ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಒಂದು ವೇಳೆ ಇಂದು ಸೋತರೆ ಋತುರಾಜ್ ಪಡೆಯ ಪ್ಲೇ-ಆಫ್ ಕನಸು ಬಹುತೇಕ ನುಚ್ಚುನೂರಾಗಲಿದೆ.

ಮತ್ತೊಂದೆಡೆ, ಈ ಸೀಸನ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 11 ಪಂದ್ಯಗಳಲ್ಲಿ ಕೇವಲ 3 ಗೆಲುವಿನೊಂದಿಗೆ ಈಗಾಗಲೇ ಅಧಿಕೃತವಾಗಿ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿದೆ. ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿರುವ ಲಕ್ನೋ ತಂಡಕ್ಕೆ ಇಂದಿನ ಪಂದ್ಯ ಕೇವಲ ಔಪಚಾರಿಕವಾಗಿದ್ದರೂ, ತವರು ಮೈದಾನದಲ್ಲಿ ಗೆದ್ದು ಅಭಿಮಾನಿಗಳಿಗೆ ಸಂತಸ ನೀಡಲು ಹಾಗೂ ಸಿಎಸ್‌ಕೆ ಆಟ ಕೆಡಿಸಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ಲಕ್ನೋದ ಏಕನಾ ಕ್ರಿಕೆಟ್ ಮೈದಾನವು ಸಾಂಪ್ರದಾಯಿಕವಾಗಿ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಅದರಲ್ಲೂ ಸ್ಪಿನ್ನರ್‌ಗಳು ಹಾಗೂ ಸ್ಲೋ ಬೌಲರ್‌ಗಳು ಇಲ್ಲಿ ಹೆಚ್ಚು ಪ್ರಾಬಲ್ಯ ಸಾಧಿಸುವ ಸಾಧ್ಯತೆ ದಟ್ಟವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !