July 18, 2026
Saturday, July 18, 2026
spot_img

ಟ್ಯಾಂಕರ್-ಟ್ರಾಕ್ಟರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮ*ರಣ, ಹಲವರಿಗೆ ಗಾಯ

ಹೊಸದಿಗಂತ ವರದಿ ವಿಜಯನಗರ:

​ಹೊಸಪೇಟೆ ಸಮೀಪದ ಟಿ.ಬಿ. ಡ್ಯಾಂ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

​ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿ ಹಂಚಿಕೊಂಡಿರುವ ತುಂಗಭದ್ರಾ ನದಿಯ ಮೇಲ್ಸೇತುವೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಟ್ರಾಕ್ಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಸೇತುವೆಯಿಂದ ಕೆಳಕ್ಕೆ ಬಿದ್ದಿವೆ. ಗಾಯಾಳುಗಳನ್ನು ಪೊಲೀಸರು ಅಂಬ್ಯುಲೆನ್ಸ್ ಮೂಲಕ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:

​ಸ್ಥಳಕ್ಕೆ ವಿಜಯನಗರ ಎಸ್ಪಿ ಜಾಹ್ನವಿ ಹಾಗೂ ಹೊಸಪೇಟೆ ಡಿವೈಎಸ್ಪಿ ಕೆ.ಪಿ. ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !