ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ದೇಶದ ಜನರ ಮೇಲಿನ ಹೊರೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಾಗತಿಕ ತೈಲ ಬಿಕ್ಕಟ್ಟಿನ ನಡುವೆಯೇ ಇಂಧನ ದರ ಹೆಚ್ಚಿಸಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಲೀಟರ್ಗೆ ತಲಾ 3 ರೂಪಾಯಿ ಹೆಚ್ಚಿಸಿದ ಬಳಿಕ ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಮೋದಿ ಸರ್ಕಾರದ ತಪ್ಪಿಗೆ ಜನ ಬೆಲೆ ತೆರುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದು ಮೊದಲ ಆಘಾತ ಮಾತ್ರ, ಮುಂದಿನ ದಿನಗಳಲ್ಲಿ ಇನ್ನಷ್ಟು ಹೊರೆ ಜನರ ಮೇಲೇ ಬೀಳಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯ ಪರಿಣಾಮ ಭಾರತದಲ್ಲೂ ಇಂಧನ ಬೆಲೆ ಹೆಚ್ಚಳವಾಗಿದೆ. ಇರಾನ್-ಅಮೆರಿಕ ಸಂಘರ್ಷದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಅಡ್ಡಿಯಾಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರ ಪರಿಣಾಮವಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಭಾರೀ ಏರಿಕೆ ಕಂಡಿವೆ.
ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಸಿಎನ್ಜಿ ದರವೂ ಹೆಚ್ಚಳ ಕಂಡಿದ್ದು, ಸಾಮಾನ್ಯ ಜನರ ಜೀವನ ವೆಚ್ಚ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.



