May 15, 2026
Friday, May 15, 2026
spot_img

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಕೆಮಿಸ್ಟ್ರಿ ಪ್ರೊಫೆಸರನ್ನು ಬಂಧಿಸಿದ ಸಿಬಿಐ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಚುರುಕುಗೊಳಿಸಿದ್ದು, ಇದರ ಹಿಂದಿನ ಕಿಂಗ್ ಪಿನ್ ನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪುಣೆ ಮೂಲದ ರಸಾಯನಶಾಸ್ತ್ರ ಉಪನ್ಯಾಸಕ ಪಿ.ವಿ. ಕುಲಕರ್ಣಿ ಎಂದು ಗುರುತಿಸಲಾಗಿದ್ದು, ಹಲವು ವರ್ಷಗಳಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸಿದ್ಧತೆಯ ಸಮಿತಿಯ ಭಾಗವಾಗಿದ್ದರು.

ಆರೋಪಿಯು ಪುಣೆಯಲ್ಲಿರುವ ತನ್ನ ನಿವಾಸದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಮಾತ್ರ ವಿಶೇಷ ತರಗತಿಗಳನ್ನು ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಜೊತೆಗೆ ಏಪ್ರಿಲ್ ಕೊನೆಯ ವಾರದಲ್ಲಿ, ಮತ್ತೊಬ್ಬ ಆರೋಪಿ ಮನೀಷಾ ವಾಘ್ಮರೆ ಸಹಾಯದಿಂದ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದ್ದರು ಎಂದು ಸಿಬಿಐ ಹೇಳಿದೆ.

ತರಬೇತಿ ಸಮಯದಲ್ಲಿ ಕುಲಕರ್ಣಿ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳು, ಉತ್ತರಗಳನ್ನು ಹೇಳುತ್ತಿದ್ದರು. ವಿದ್ಯಾರ್ಥಿಗಳು ಎಲ್ಲವನ್ನು ನೋಟ್‌ ಬುಕ್‌ಗಳಲ್ಲಿ ಬರೆದುಕೊಂಡಿದ್ದರು. ಮೇ 3 ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿಯೂ ಅದೇ ಪ್ರಶ್ನೆಗಳಿದ್ದವು ಎಂದು ಸಿಬಿಐ ತನಿಖೆಯಲ್ಲಿ ಬಹಿರಂಗವಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ನಾನಾ ಕಡೆಗಳಿಂದ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಐದು ಆರೋಪಿಗಳನ್ನು ಈಗಾಗಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !