May 16, 2026
Saturday, May 16, 2026
spot_img

ಪ್ಲೇಆಫ್ ಮುನ್ನ ಆರ್‌ಸಿಬಿಗೆ ‘ಗ್ಲೀಸನ್’ ಬಲ! ಟೀಮ್ ಗೆ ಎಂಟ್ರಿ ಕೊಟ್ಟ ‘ಒಂಟಿಸಲಗ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ ಪ್ಲೇಆಫ್ ಹಂತ ಹತ್ತಿರವಾಗುತ್ತಿದ್ದಂತೆ RCB ತಂಡ ಮಹತ್ವದ ಬದಲಾವಣೆಗೆ ಮುಂದಾಗಿದೆ.

ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರ್‌ಸಿಬಿ ಹೊಸ ವೇಗದ ಬೌಲರ್‌ಗೆ ಅವಕಾಶ ನೀಡಿದ್ದು, ಇಂಗ್ಲೆಂಡ್‌ನ ಅನುಭವಿ ಪೇಸರ್ ರಿಚರ್ಡ್ ಗ್ಲೀಸನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಫ್ರಾಂಚೈಸಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, 38 ವರ್ಷದ ರಿಚರ್ಡ್ ಗ್ಲೀಸನ್ ಅವರನ್ನು 1.6 ಕೋಟಿ ರೂಪಾಯಿ ಮೊತ್ತಕ್ಕೆ ಒಪ್ಪಂದ ಮಾಡಿಕೊಂಡಿದೆ. ಪ್ಲೇಆಫ್ ಹಂತದ ಮುನ್ನ ಅನುಭವಿ ಬೌಲರ್ ತಂಡಕ್ಕೆ ಸೇರ್ಪಡೆಯಾಗಿರುವುದು ಆರ್‌ಸಿಬಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ:

ಇನ್ನೊಂದೆಡೆ, ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ ಎನ್‌ಒಸಿ ಸಿಗದ ಕಾರಣ ನುವಾನ್ ತುಷಾರ ಐಪಿಎಲ್‌ನಿಂದ ಹೊರಗುಳಿದಿದ್ದಾರೆ. ಆರಂಭದಲ್ಲಿ ಅವರು ಕಾನೂನು ಹೋರಾಟದ ಚಿಂತನೆಯಲ್ಲಿದ್ದರೂ, ಬಳಿಕ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಗ್ಲೀಸನ್ ಈಗಾಗಲೇ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್‌ನಲ್ಲಿ 9 ವಿಕೆಟ್ ಪಡೆದಿದ್ದು, ಕಳೆದ ಸೀಸನ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರವೂ ಆಡಿದ್ದರು. ಸದ್ಯ 16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ, ಪ್ಲೇಆಫ್‌ಗೆ ಬಹುತೇಕ ಸ್ಥಾನ ಖಚಿತಪಡಿಸಿಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !