ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರ್ಪಲ್ ಲೈನ್ (ನೇರಳೆ ಮಾರ್ಗ) ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರವು ಈ ಭಾನುವಾರ ಬೆಳಿಗ್ಗೆ 7 ರ ಬದಲಿಗೆ ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ.
ಮೆಜೆಸ್ಟಿಕ್ ಮತ್ತು ಸೆಂಟ್ರಲ್ ಕಾಲೇಜು ನಿಲ್ದಾಣಗಳ ನಡುವೆ ಅತ್ಯಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಸಮಯ ಬದಲಾವಣೆ ಅನಿವಾರ್ಯವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಆದಾಗ್ಯೂ, ಚಲ್ಲಘಟ್ಟದಿಂದ ವಿಜಯನಗರ, ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್ (ಕಾಡುಗೋಡಿ), ಮಾದವಾರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್, ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ಆಯಾ ಕೊನೆಯ ನಿಲ್ದಾಣಗಳಿಂದ ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.



