May 16, 2026
Saturday, May 16, 2026
spot_img

ಪ್ರಧಾನಿ ಮೋದಿ ಕರೆಗೆ ಓಗೊಟ್ಟು ನಮ್ಮ ಮೆಟ್ರೋ ಹತ್ತಿದ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬಿಕ್ಕಟ್ಟನ್ನು ನಿಯಂತ್ರಿಸಲು ಮತ್ತು ಪರಿಸರ ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಕರೆ ನೀಡಿದ್ದರು.

ಪ್ರಧಾನಿ ಈ ಕರೆಯನ್ನು ಗೌರವಿಸಿ, ಸಾರ್ವಜನಿಕರಿಗೆ ಮಾದರಿಯಾಗುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಕಾರು ಹಾಗೂ ಬೆಂಗಾವಲು ಪಡೆ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಇಂಧನ ಮಿತವ್ಯಯ ಹಾಗೂ ಜನರೊಂದಿಗೆ ನೇರ ಸಂಪರ್ಕ ಹೊಂದಲು ಮೆಟ್ರೋ ಬಳಸಿ ಎಂಬ ಪ್ರಧಾನಿ ಮೋದಿ ಮಂತ್ರವನ್ನು ಅಳವಡಿಸಿಕೊಂಡು ವಿಜಯೇಂದ್ರ, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !