May 16, 2026
Saturday, May 16, 2026
spot_img

ನೆದರ್‌ಲ್ಯಾಂಡ್ಸ್‌ ನಲ್ಲೂ ಪಸರಿಸಿದ ‘ಝಲ್ಮುರಿ’: ಪ್ರಧಾನಿ ಮೋದಿ ಮಾತಿಗೆ ಚಪ್ಪಾಳೆಯ ಸುರಿಮಳೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಇಂದು ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಹೇಗ್‌ನಲ್ಲಿ ಆಯೋಜಿಸಲಾಗಿದ್ದ ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿ ತಮ್ಮ ಮಾತಿನ ನಡುವೆ ಭಾರತದಲ್ಲಿ ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ‘ಝಲ್ಮುರಿ’ ಕುರಿತು ಮಾತನಾಡಿದ್ದು, ನೆರೆದಿದ್ದ ಜನಸಾಗರ ನಗು ಮತ್ತು ಚಪ್ಪಾಳೆಯ ಸುರಿಮಳೆಗೈದರು.

ಭಾರತದ ಪಂಚ ರಾಜ್ಯ ಚುನಾವಣೆಯಲ್ಲಿ ಭಾಗವಹಿಸಿದ ಮತದಾರರನ್ನು ಅಭಿನಂದಿಸಿದ ಮೋದಿ ಅವರು, ಮುಗುಳ್ನಗುತ್ತಾ, ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂಬ ಕೇಳಿದರು. ಇತ್ತ ಪ್ರಧಾನಿ ಮೋದಿ ಅವರ ಈ ಲಘು ಹಾಸ್ಯಕ್ಕೆ ಇಡೀ ಸಭಾಂಗಣವನ್ನು ನಗೆಗಡಲಲ್ಲಿ ತೇಲಿಸಿದರು.

ಬಂಗಾಳದ ಅತ್ಯಂತ ಜನಪ್ರಿಯ ತಿಂಡಿ
ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದ ವೇಳೆ ಜಾರ್ಗ್ರಾಮ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಮುಗಿಸಿ ವಾಪಸಾಗುತ್ತಿದ್ದ ವೇಳೆ ಪ್ರಧಾನಿ ಮೋದಿ ಅವರು ರಸ್ತೆಬದಿಯ ಸಣ್ಣ ಅಂಗಡಿಯೊಂದಕ್ಕೆ ಭೇಟಿ ನೀಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈ ವೇಳೆ ಬಂಗಾಳದ ಅತ್ಯಂತ ಜನಪ್ರಿಯ ತಿಂಡಿಯಾದ ಝಲ್ಮುರಿಯನ್ನು ಸವಿದಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !