October 15, 2026
Thursday, October 15, 2026
spot_img

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಬಲೆಗೆ ಬಿದ್ದ ಎನ್‌ಟಿಎ ತಜ್ಞೆ ಮನೀಷಾ ಗುರುನಾಥ್ ಮಾಂಧರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಮತ್ತೋರ್ವ ಪ್ರಮುಖ ಆರೋಪಿ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಗುರುನಾಥ್ ಮಾಂಧರೆ ಎಂಬುವವರನ್ನು ಬಂಧಿಸಿದ್ದಾರೆ.

 ಮಾಂಧರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ ನೇಮಿಸಲಾಗಿತ್ತು. ಪರೀಕ್ಷಾ ಪ್ರಕ್ರಿಯೆಯ ಸಮಯದಲ್ಲಿ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ಪ್ರಶ್ನೆಪತ್ರಿಕೆಗಳನ್ನೂ ನೋಡಿಕೊಳ್ಳುವ ಅವಕಾಶ ಹೊಂದಿದ್ದರು.

ಮನೀಷಾ ಮಾಂಧರೆ ತನ್ನ ಪುಣೆಯ ನಿವಾಸದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್ ತರಗತಿಗಳನ್ನು ನಡೆಸುತ್ತಿದ್ದರು. ಈ ವೇಳೆ ಆಕೆ ನೀಟ್ ಪರೀಕ್ಷೆಗೆ ಬರಲಿದ್ದ ಪ್ರಾಣಿಶಾಸ್ತ್ರ ಪ್ರಶ್ನೆಗಳನ್ನು ಮುಂಚಿತವಾಗಿಯೇ ತಿಳಿಸುತ್ತಿದ್ದರು. ಬಳಿಕ ವಿದ್ಯಾರ್ಥಿಗಳ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳಲ್ಲಿ ಗುರುತು ಮಾಡಿಸಿಕೊಡುತ್ತಿದ್ದರು. ಈ ಪ್ರಶ್ನೆಗಳಲ್ಲಿ ಹಲವು ಮೇ 3 ರಂದು ನಡೆದ ನೀಟ್ ಪ್ರಶ್ನೆ ಪತ್ರಿಕೆಯಲ್ಲಿ ಕಾಣಿಸಿಕೊಂಡ ಪ್ರಶ್ನೆಗಳಿಗೆ ತಾಳೆಯಾಗಿರುವುದು ತನಿಖೆಯಲ್ಲಿ ಬಯಲಾಗಿದೆ.

ತನಿಖೆಗೆ ಸಂಬಂಧಿಸಿದಂತೆ ದೆಹಲಿಯ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಿದ ನಂತರ ಮಾಂಧರೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read