May 16, 2026
Saturday, May 16, 2026
spot_img

ಬ್ಯಾಂಕಾಕ್‌ನಲ್ಲಿ ಭೀಕರ ದುರಂತ: ರೈಲು ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್‌; 8 ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ ನಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ-ರೈಲು ಅಪಘಾತ ಭಾರೀ ಆತಂಕ ಸೃಷ್ಟಿಸಿದೆ.

ಮಕ್ಕಾಸನ್ ನಿಲ್ದಾಣದ ಬಳಿ ಸರಕು ರೈಲು ಮತ್ತು ಪ್ರಯಾಣಿಕರ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯ ತೀವ್ರತೆಗೆ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಧ್ಯಾಹ್ನ ಸಂಭವಿಸಿದ ಈ ದುರಂತದ ಬಳಿಕ ಸ್ಥಳದಲ್ಲಿ ಭಾರೀ ಗೊಂದಲ ಉಂಟಾಯಿತು. ಡಿಕ್ಕಿಯ ಪರಿಣಾಮ ಬಸ್‌ಗೆ ಬೆಂಕಿ ತಗುಲಿ, ಕಪ್ಪು ಹೊಗೆ ಆಕಾಶದೆತ್ತರಕ್ಕೆ ಹರಡಿದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿತು. ಸಮೀಪದ ಕಟ್ಟಡದಿಂದ ಚಿತ್ರೀಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:

ಪ್ರಾಥಮಿಕ ಮಾಹಿತಿಯ ಪ್ರಕಾರ, ರೈಲ್ವೆ ಕ್ರಾಸಿಂಗ್ ತಡೆಗೋಡೆ ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಹಳಿ ದಾಟುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಸರಕು ರೈಲು ಡಿಕ್ಕಿ ಹೊಡೆದು, ಬಸ್ ಅನ್ನು ದೂರದವರೆಗೆ ಎಳೆದೊಯ್ದಿದೆ. ನಂತರ ಹಲವು ಕಾರುಗಳು ಮತ್ತು ಬೈಕ್‌ಗಳಿಗೂ ಹಾನಿಯಾಗಿದೆ.

ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !