ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:
ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



