October 10, 2026
Saturday, October 10, 2026
spot_img

CINE | ‘ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವವೇ ಇಲ್ಲ’: ಶಿವಣ್ಣ ‘ಬೇಲ್’ ಟೀಸರ್‌ಗೆ ಫ್ಯಾನ್ಸ್ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ನಿರ್ದೇಶಕ ಪವನ್ ಒಡೆಯರ್ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈಜೋಡಿಸಿರುವ ಈ ಚಿತ್ರ ಈಗಾಗಲೇ ಭಾರೀ ಕುತೂಹಲ ಮೂಡಿಸಿದ್ದು, ಟೀಸರ್‌ ಮೂಲಕ ಚಿತ್ರದ ಹೈಪ್ ಮತ್ತಷ್ಟು ಹೆಚ್ಚಾಗಿದೆ.

ನೈಜ ಘಟನೆಗಳ ಸ್ಫೂರ್ತಿಯಲ್ಲಿ ಮೂಡಿಬರುತ್ತಿರುವ ‘ಬೇಲ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಅವರ ಖಡಕ್ ಎಂಟ್ರಿ ಮತ್ತು ಮಾಸ್ ಡೈಲಾಗ್ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಸಿದೆ. “ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವ ಯಾವತ್ತೂ ಆಗೋದಿಲ್ಲ” ಎಂಬ ಡೈಲಾಗ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ:

‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಶಿವಣ್ಣ ‘ವಿಜಿ’ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್‌ನಲ್ಲಿ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದಿದ್ದರೂ, ಆಕ್ಷನ್ ಮತ್ತು ಇಂಟೆನ್ಸ್ ಶೈಲಿ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ‘ಬೇಲ್’ ಸಿನಿಮಾ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತೆರೆಗೆ ಬರಲಿದ್ದು, ಶಿವಣ್ಣ ಅಭಿಮಾನಿಗಳು ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

Must Read