May 17, 2026
Sunday, May 17, 2026
spot_img

ಬಂಟ್ವಾಳದಲ್ಲಿ ಚಲಿಸುತ್ತಿದ್ದ ಲಾರಿಯಲ್ಲಿ ದಿಢೀರ್ ಬೆಂಕಿ: ಗುಜರಿ ಸಾಮಗ್ರಿಗಳು ಬೆಂಕಿಗಾಹುತಿ

ಹೊಸದಿಗಂತ ವರದಿ, ಬಂಟ್ವಾಳ:

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಹೊತ್ತಿ ಉರಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಗುಜರಿ ಸಾಮಗ್ರಿಗಳಿಗೆ ಬೆಂಕಿ

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗುಜರಿ ವಸ್ತುಗಳನ್ನು ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಳಗೆ ದಿಢೀರ್ ಸಮಸ್ಯೆ ಉಂಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಲಾರಿಯೊಳಗಿದ್ದ ಗುಜರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಗುಜಿರಿಯಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಈ ಘಟನೆ ನಡೆದಿರಬೇಕೆಂದು ಶಂಕಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !