May 18, 2026
Monday, May 18, 2026
spot_img

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ: ಕೆ.ಆರ್. ಸರ್ಕಲ್ ಅಂಡರ್​​ಪಾಸ್​​ ಬಂದ್​​!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಮಳೆ ಸುರಿಯುತ್ತಿದೆ. ದಿಢೀರ್‌ ವರುಣನ ಆಗಮನದಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ.

ತಗ್ಗು ಪ್ರದೇಶಗಳು ಜಲಾವೃತ

ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಶನ್, ಶಾಂತಿನಗರ, ವಸಂತನಗರ ಮತ್ತು ಸದಾಶಿವನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ವಿಜಯನಗರ, ಸುಬ್ರಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು ಕೆರೆಯಂತಾಗಿವೆ.

ಬಿರುಗಾಳಿಗೆ ಮುರಿದ ಮರದ ಕೊಂಬೆಗಳು

ಬೆಂಗಳೂರಿನ ದಕ್ಷಿಣ ಮತ್ತು ಈಶಾನ್ಯ ಭಾಗಗಳಾದ ಹೆಬ್ಬಾಳ, ಯಲಹಂಕ, ಗಿರಿನಗರ, ಬಸವನಗುಡಿ, ಜಯನಗರ, ಜೆ.ಪಿ ನಗರ, ಬನಶಂಕರಿ ಮೊದಲಾದ ಕಡೆಯಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಬಿರುಗಾಳಿಗೆ ಕೆಲವು ಕಡೆ ಮರಗಳ ಕೊಂಬೆಗಳು ಮುರಿದು ಬಿದ್ದಿದೆ. ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್

ಅನಾಹುತಗಳನ್ನು ತಪ್ಪಿಸಲು ಬಿಬಿಎಂಪಿ ಮತ್ತು ಸಂಚಾರಿ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆ.ಆರ್. ಸರ್ಕಲ್ ಅಂಡರ್ ಪಾಸ್ ಅನ್ನು ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಹಾಗೂ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !