May 18, 2026
Monday, May 18, 2026
spot_img

Karnataka Rain Alert | ರಾಜ್ಯದ ಹಲವೆಡೆ ವರುಣನ ಅಬ್ಬರ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಆರೆಂಜ್ ಅಲರ್ಟ್?

ಮೇ 19ರಂದು ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬಳ್ಳಾರಿ, ಹಾಸನ, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ:

ಬೆಂಗಳೂರಲ್ಲೂ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ಮೇ 21ರವರೆಗೆ ಮಳೆ ಮುಂದುವರಿಕೆ

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಉತ್ತರ ಒಳನಾಡು ಭಾಗದಲ್ಲಿ ಮೇ 21ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !