May 18, 2026
Monday, May 18, 2026
spot_img

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು

ಹೊಸದಿಗಂತ ವರದಿ ದಾವಣಗೆರೆ:

ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಸೋಮವಾರ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಆಕಾಶ್(17) ಮೃತ ಯುವಕ.

ಇದನ್ನೂ ಓದಿ:

ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಆಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತನನ್ನು ರಕ್ಷಿಸಲು ಜೊತೆಗಿದ್ದವರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ಯುವಕನ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !