May 19, 2026
Tuesday, May 19, 2026
spot_img

‘ನ್ಯಾಯಾಂಗ ನಿಂದನೆ’ ವಿವಾದ: ಕೇಜ್ರಿವಾಲ್ ಸೇರಿ AAP ನಾಯಕರಿಗೆ ‘ಹೈ’ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಹೈಕೋರ್ಟ್ ನ್ಯಾಯಾಂಗ ಅವಹೇಳನ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಹಲವು ಎಎಪಿ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ನಾಲ್ಕು ವಾರದಲ್ಲಿ ಉತ್ತರಕ್ಕೆ ಸೂಚನೆ

ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದರ್ ದುಡೇಜಾ ಅವರ ವಿಭಾಗೀಯ ಪೀಠ, ಆರೋಪಿಗಳಿಗೆ ನಾಲ್ಕು ವಾರಗಳೊಳಗೆ ಉತ್ತರ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 4ಕ್ಕೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ:

‘ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ’ ಆರೋಪ

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಸಾರ್ವಜನಿಕ ಹೇಳಿಕೆಗಳು, ಸಂಪಾದಿತ ವಿಡಿಯೋಗಳು ಮತ್ತು ಪೋಸ್ಟ್‌ಗಳ ಮೂಲಕ ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಅವರು ದೂರಿದ್ದಾರೆ.

ಎಎಪಿ ನಾಯಕರ ವಿರುದ್ಧ ಗಂಭೀರ ಆರೋಪ

ಕೇಜ್ರಿವಾಲ್ ಮತ್ತು ಇತರ ನಾಯಕರು ಕಾನೂನು ಪ್ರಕ್ರಿಯೆ ಅನುಸರಿಸುವ ಬದಲು ಸಾಮಾಜಿಕ ಮಾಧ್ಯಮ ಬಳಸಿ ನ್ಯಾಯಾಂಗವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಾರಣಾಸಿಯ ಕಾರ್ಯಕ್ರಮದ ಭಾಷಣವನ್ನು ಸಂಪಾದಿಸಿ ಹಂಚಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !