ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಸೀಸನ್ ಅಂತಿಮ ಹಂತ ತಲುಪುತ್ತಿದ್ದಂತೆ ಪ್ಲೇಆಫ್ ಹೋರಾಟ ರೋಚಕ ಘಟ್ಟಕ್ಕೆ ತಲುಪಿದೆ. ಈಗಾಗಲೇ ಮೂರು ತಂಡಗಳು ಅಧಿಕೃತವಾಗಿ ಪ್ಲೇಆಫ್ ಪ್ರವೇಶ ಖಚಿತಪಡಿಸಿಕೊಂಡಿದ್ದು, ಉಳಿದ ಒಂದೇ ಸ್ಥಾನಕ್ಕಾಗಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಶುರುವಾಗಿದೆ.
ಆರ್‌ಸಿಬಿ ಮೊದಲ ತಂಡ
ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ತಂಡವಾಗಿ ಪ್ಲೇಆಫ್‌ಗೆ ಪ್ರವೇಶಿಸಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಗುಜರಾತ್ ಟೈಟಾನ್ಸ್ ಮತ್ತು ಹೈದರಾಬಾದ್ ತಂಡಗಳು ಕೂಡ ಟಾಪ್-4 ಸ್ಥಾನವನ್ನು ಖಚಿತಪಡಿಸಿಕೊಂಡಿವೆ.
ಇದನ್ನೂ ಓದಿ:
ಒಂದೇ ಸ್ಥಾನಕ್ಕೆ ಭಾರಿ ಫೈಟ್
ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್ , ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಪ್ರತಿಯೊಂದು ಪಂದ್ಯವೂ ಈಗ ‘ಡು ಆರ್ ಡೈ’ ಪರಿಸ್ಥಿತಿ ನಿರ್ಮಿಸಿದೆ.
ಫೈನಲ್‌ಗೆ ವೇದಿಕೆ ಸಜ್ಜು
ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳು ಮೇ 26ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿವೆ. ಮೇ 31ರಂದು ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ಈಗಲೇ ಅಭಿಮಾನಿಗಳ ಕಾತರ ಹೆಚ್ಚಾಗಿದೆ.



