May 19, 2026
Tuesday, May 19, 2026
spot_img

ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ FIR

ಹೊಸದಿಗಂತ ವರದಿ ಬೆಳಗಾವಿ:

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದೂರು ದಾಖಲಾಗಿದೆ.

ಶೇ.36 ಬಡ್ಡಿ ಭರವಸೆ ನೀಡಿ ಮೋಸ ಆರೋಪ

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲೂಕಿನ ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಠೇವಣಿ ಹಣದ ಮೇಲೆ ವಾರ್ಷಿಕ ಶೇ.36ರಷ್ಟು ಬಡ್ಡಿ ನೀಡುವುದಾಗಿ ಹೇಳಿದ್ದ ಶಿವಾನಂದ ಮಾತುಗಳನ್ನು ನಂಬಿ ಕೃಷ್ಣಾ ಅಪ್ರಾಜ್ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ಹಂತ ಹಂತವಾಗಿ ಒಟ್ಟು 5 ಲಕ್ಷ ರೂಪಾಯಿಗಳನ್ನು ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದರು. ಆದರೆ ಹೂಡಿಕೆ ಮಾಡಿದ ಹಣಕ್ಕೆ ಬಡ್ಡಿಯೂ ನೀಡದೆ, ಅಸಲನ್ನೂ ಮರಳಿಸದೆ ನಂಬಿಸಿ ಮೋಸ ಮಾಡಿರುವುದಾಗಿ ದೂರಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:

ಸಿಐಡಿಗೆ ತನಿಖೆ ಹಸ್ತಾಂತರ

ಸದ್ಯ ಈ ಇಡೀ ಬಹುಕೋಟಿ ವಂಚನೆ ಹಗರಣದ ತನಿಖೆ ಸಿಐಡಿಗೆ ಹಸ್ತಾಂತರಗೊಳ್ಳುತ್ತಿದ್ದಂತೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !