ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಆವರಣದಲ್ಲಿ ಭಾರತೀಯ ಶಿಷ್ಟಾಚಾರ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಚಂಡೀಗಢ ಮೂಲದ 38 ವರ್ಷದ ನರೇನ್ ಧರ್ ಎಂದು ಗುರುತಿಸಲಾಗಿದೆ. ಅವರು ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಸಹಾಯಕ ಪ್ರೋಟೋಕಾಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲ
ಈ ಕುರಿತು ಮಾತನಾಡಿರುವ ಚಿತ್ತಗಾಂಗ್ ನಗರ ಪೊಲೀಸ್ ಸಹಾಯಕ ಆಯುಕ್ತ ಅಮಿನೂರ್ ರಶೀದ್, ಬಾಂಗ್ಲಾದೇಶ ಪೊಲೀಸರು, ಧರ್ ಅವರ ಮೃತದೇಹವನ್ನು ಭಾರತೀಯ ಸಹಾಯಕ ಹೈಕಮಿಷನ್ ಕಚೇರಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಸದ್ಯ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಬಾಂಗ್ಲಾ ಪೊಲೀಸರಿಂದ ತನಿಖೆ
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಬಾಂಗ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.



